Home
WELCOME TO THE OFFICIAL WEBSITE OF TOWN MUNICIPAL COUNCIL NAVALGUND
(GIS based Property tax information system) in National Awards for E-Governance 2011.
_____________________________________________________________________________________________________________________
ನವಲಗುಂದ ಪಟ್ಟಣವು ಐತಿಹಾಸಿಕ ಸಾಧು ಸಂತರು ನೆಲೆಸಿದ ಪುಣ್ಯ ಭೂಮಿಯಾಗಿದ್ದು ಈ ಪಟ್ಟಣವು ಭಾರತ ರಾಷ್ಟ್ರದ ಕರ್ನಾಟಕ ರಾಜ್ಯದ ಧಾರವಾಡ ಜಿಲ್ಲೆಯಲ್ಲಿ ಬರುವ ತಾಲೂಕ ಕೇಂದ್ರಸ್ಥಾನವಾಗಿದೆ. ಅಣ್ಣಿಗೇರಿ ರೈಲು ನಿಲ್ದಾಣದಿಂದ 17ಕಿ.ಮಿ ಅಂತರದಲ್ಲಿದೆ ಹಾಗೂ ರಾಷ್ಟ್ರಿಯ ಹೆದ್ದಾರಿ 218ರಲ್ಲಿ ಹುಬ್ಬಳ್ಳಿಯಿಂದ ನಗರದಿಂದ 35ಕಿ.ಮಿ ಅಂತರದಲ್ಲಿದೆ.ಅಲ್ಲದೇ ಹುಬ್ಬಳ್ಳಿಯಿಂದ ವಿಮಾನಯಾನ ಸೌಲಭ್ಯವನ್ನು ಸಹ ಹೊಂದಿದೆ. ನವಲಗುಂದ ಪಟ್ಟಣದಲ್ಲಿ ಸರ್ವ ಧರ್ಮದ ಜನಾಂಗದವರು ವಾಸಿಸುತ್ತಿದ್ದು,ಸೌಹಾರ್ದಯುತ ಜನ ಜೀವನಕ್ಕೆ ಹಿಡಿದ ಕನ್ನಡಿಯಾಗಿದೆ.ಸರ್ವ ಧರ್ಮದ ಶಾಂತಿಯ ತೋಟ ಇದ್ದಂತೆ ಇರುವ ಪಟ್ಟಣವಾಗಿದೆ. ನವಲಗುಂದ ಭೌಗೋಳಿಕ ಕ್ಷೇತ್ರವು ಕಪ್ಪು ಜೇಡಿ ಮಣ್ಣಿನಿಂದ ಕೂಡಿದ್ದು.ಕೃಷಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ.ಅಲ್ಲದೇ ಗುಡಿ ಕೈಗಾರಿಕೆ ಹಾಗೂ ಕರಕುಶಲ ಕರ್ಮಿಗಳು ವಾಸಿಸುತ್ತಿದ್ದಾರೆ.ಇದಕ್ಕೆ ಸಾಕ್ಷಿ ಎಂಬತ ನವಲಗುಂದದ ಕೈಮಗ್ಗ ಜಮಖಾನೆಗಳು ಜಗತ್ತ ಪ್ರಸಿದ್ದಿಯನ್ನು ಪಡೆದಿರುತ್ತವೆ.ನವಲಗುಂದದಲ್ಲಿ ಅನೇಕ ಸಾಧು ಸಂತರು ಆಗಿ ಹೋಗಿದ್ದು,ಇವರಲ್ಲಿ ಗವಿಮಠದ ಶ್ರೀ ಮ.ನಿ.ಪ್ರ.ಜಡೆ ಸಿದ್ದೇಶ್ವರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಯತಿಚಕ್ರವರ್ತಿ ಅಜಾತ ನಾಗಲಿಂಗ ಮಹಾಸ್ವಾಮಿಗಳು ಅಲ್ಲದೇ ಹಿರೇಮಠದ ಕತ್ರು ಶ್ರೀ ಷ.ಬ್ರ.ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಶ್ರೀ ಹುರಕಡ್ಲಿ ಅಜ್ಜನವರು ಹೀಗೆ ಇನ್ನೂ ಹಲವಾರು ಪವಾಡ ಪುರುಷರು ನೆಲಸಿದ ನಾಡು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಅಲ್ಲದೇ ತ್ಯಾಗವೀರ ಶಿರಸಂಗಿ ಲಿಂಗರಾಜ ದೇಸಾಯಿ ಇವರು ನೆಲೆಸಿದ ನಾಡು ಮತ್ತು ಅವರ ಸಮಾಧಿಯು ಸಹ ನವಲಗುಂದದಲ್ಲಿ ಇಂದಿಗೂ ಇರುತ್ತದೆ.
_____________________________________________________________________________________________________________________
ಕೆ.ಎಂ.ಆರ್.ಪಿ ಗಣಕೀಕರಣ ಯೋಜನೆಯ ಕಿರಿ ಪರಿಚಯ
ಪೌರಸುಧಾರಣಾ ಕೋಶದ ಮೇಲುಸ್ತುವಾರಿಯಲ್ಲಿ ನವಲಗುಂದ ಪುರಸಭೆಯಲ್ಲಿ ಹಲವಾರು ಗಣಕೀಕರಣ ಯೋಜನೆಗಳು ಪೂರ್ಣಗೊಂಡಿರುತ್ತವೆ ಹಾಗೂ ಇನ್ನು ಕೆಲ ಗಣಕೀಕರಣ ಯೋಜನೆಗಳು ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಮುಕ್ತಾಯಗೊಂಡು ಸಾರ್ವಜನಿಕರ ಉಪಯೋಗಕ್ಕಾಗಿ ಲಭ್ಯವಾಗಲಿವೆ.ಈಗಾಗಲೇ ಬಹುತೇಕ ಮಾಹಿತಿಯನ್ನು ಕಛೇರಿ ವೆಬ್ ಸೈಟ್‌ನಲ್ಲಿ ಅಳವಡಿಸಲಾಗಿರುತ್ತದೆ.
-
ಕಛೇರಿ ವೆಬ್‌ಸೈಟ್:ನವಲಗುಂದ ಪುರಸಭೆಯ ತನ್ನದೇ ಆದ ವೆಬ್‌ಸೈಟ್ ಹೊಂದಿದ್ದು ಪಟ್ಟಣದ ಸಮಗ್ರ ಮಾಹಿತಿ ಇದರಲ್ಲಿ ಲಭ್ಯವಿರುತ್ತದೆ.ಕಛೇರಿಯ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಬಿಂಬಿಸುವ ಸದುದ್ದೇಶದಿಂದ ಪೌರಸುಧಾರಣಾ ಕೋಶ ಈ ವೆಬ್ ಸೈಟ್ ಅಭಿವೃದ್ಧಿ ಪಡಿಸಿದ್ದು ನವಲಗುಂದ ಪುರಸಭೆಯಿಂದ ಈ ವೆಬ್ ಸೈಟ್ ನಿರ್ವಹಣೆ ಮಾಡಲಾಗುತ್ತಿದೆ. ಪ್ರಮುಖವಾಗಿ ಸಿಬ್ಬಂದಿ ಮಾಹಿತಿ, ಕೌನ್ಸಿಲ್ ಮಾಹಿತಿ, ಚುನಾಯಿತ ಪ್ರತಿನಿಧಿಗಳ ಮಾಹಿತಿ, ಟೆಂಡರ್ ಮಾಹಿತಿ, ಸಾರ್ವಜನಿಕ ಪ್ರಕಟಣೆ ಕಾಯ್ದೆ, ಮಾಹಿತಿ ಹಕ್ಕು, ಘನತ್ಯಾಜ್ಯ ವಸ್ತು ವಿಲೇವಾರಿ, ಮಳೆ ನೀರು ಕೊಯ್ಲು ಪದ್ಧತಿ, ಪಟ್ಟಣದ ರಸ್ತೆ, ಬೀದಿ ದೀಪ, ಚರಂಡಿ ಇತ್ಯಾದಿಗಳಿಗೆ ಸಂಬಂಧಿಸಿದ ಅಂಕಿ ಅಂಶಗಳು, ಪಟ್ಟಣದ ಹಣಕಾಸು ಪದ್ಧತಿ ವಿವರ, ಆಯ ವ್ಯಯ, ಸಭಾನಡವಳಿಗಳು ಇನ್ನು ಹತ್ತು ಹಲವು ಉಪಯುಕ್ತ ಮಾಹಿತಿ ಈ ವೆಬ್ ತಾಣದಲ್ಲಿ ಲಭ್ಯವಿರುತ್ತದೆ.ಪೌರ ಸುಧಾರಣಾ ಕೋಶದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿ ನಿರ್ವಹಿಸಲಾಗುತ್ತಿರುವ ಎಲ್ಲಾ ಆನ್‌ಲೈನ್ ಅಪ್ಲಿಕೇಷನ್‌ಗಳು ಈ ವೆಬ್ ತಾಣದಲ್ಲಿ ದೊರೆಯುವಂತಿದ್ದು ಪಟ್ಟಣದ ನಾಗರೀಕರು ಈ ತಾಣಕ್ಕೆ ಬೇಟಿ ನೀಡಿ ಅವಶ್ಯ ಮಾಹಿತಿ ಪಡೆಯಬಹುದಾಗಿರುತ್ತದೆ.
-
ಜನನ-ಮರಣ ದಾಖಲೆಗಳ ಆನ್ ಲೈನ್ ಅಪ್ಲಿಕೇಷನ್:1990 ರಿಂದ ಇಲ್ಲಿಯವರೆಗಿನ ಪಟ್ಟಣದ ಎಲ್ಲಾ ಜನನ-ಮರಣ ದಾಖಲೆಗಳನ್ನು ಗಣಕೀಕರಣಗೊಳಿಸಲಾಗಿದ್ದು ಸಾರ್ವಜನಿಕರಿಗೆ ಗಣಕೀಕೃತ ಜನನ-ಮರಣ ದಾಖಲಾತಿಗಳನ್ನು ವಿತರಿಸಲಾಗುತ್ತಿದೆ.ಹಳೆಯ ಜನನ-ಮರಣ ದಾಖಲಾತಿಗಳ ಡಾಟಾ ಎಂಟ್ರಿ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ದಾಖಲಾತಿಗಳ ಗಣಕೀಕರಣ ಕಾರ್ಯ ಪೂರ್ಣಗೊಳ್ಳಲಿದೆ. ಇದರಿಂದ ಸಾರ್ವಜನಿಕರು ತ್ವರಿತವಾಗಿ ಜನನ-ಮರಣ ದಾಖಲಾತಿಗಳನ್ನು ಪಡೆಯುವಲ್ಲಿ ಸಹಕಾರಿಯಾಗಿದೆ.
-
ಪಿ.ಜಿ.ಆರ್. ಆನ್ ಲೈನ್ ಅಪ್ಲಿಕೇಷನ್: ಪಟ್ಟಣದ ನಾಗರೀಕರ ದೈನಂದಿನ ಅವಶ್ಯಕತೆಗಳಾದ ಬೀದಿ ದೀಪ, ಕುಡಿಯುವ ನೀರು, ಸ್ವಚ್ಚತೆ ಇತ್ಯಾದಿ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಕೇಂದ್ರ ಸ್ಥಾಪಿಸಲಾಗಿರುತ್ತದೆ.ಈ ಕುಂದುಕೊರತೆ ಪರಿಹಾರ ಕೇಂದ್ರವು ಪ್ರತಿ ದಿನ ಮುಂಜಾನೆ 8.00 ರಿಂದ ಸಂಜೆ 8.00ರ ವರಗೆ ಕಾರ್ಯ ನಿರ್ವಹಿಸುತ್ತದೆ.ಸಾರ್ವಜನಿಕರು ಕುಂದುಕೊರತೆ ಪರಿಹಾರ ಕೇಂದ್ರದ ಸಹಾಯ ವಾಣಿ:00380-229239 ಕ್ಕೆ ಕರೆ ಮಾಡಿ ದೂರು ನೊಂದಾಯಿಸಿಕೊಳ್ಳಬಹುದಾಗಿದೆ ಅಲ್ಲದೆ ತಮ್ಮ ದೂರಿನ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಅದೇ ರೀತಿ ಈ ಕಛೇರಿ ವೆಬ್ ತಾಣಕ್ಕೆ ಬೇಟಿ ನೀಡಿ ಪಿ.ಜಿ.ಆರ್. ಆನ್‌ಲೈನ್ ಅಪ್ಲಿಕೇಷನ್ ಮುಖಾಂತರವೂ ದೂರು ನೊಂದಾಯಿಸಬಹುದಾಗಿರುತ್ತದೆ.ಅಥವಾ ನೇರವಾಗಿ ಕುಂದು ಕೊರತೆ ಪರಿಹಾರ ಕೇಂದ್ರಕ್ಕೆ ಬೇಟಿ ನೀಡಿ ದೂರು ನೊಂದಾಯಿಸಬಹುದಾಗಿರುತ್ತದೆ. ದೂರು ಸ್ವೀಕರಿಸಿದ ನಂತರ ಕುಂದು ಕೊರತೆ ಪರಿಹಾರ ಕೇಂದ್ರದ ನಿರ್ವಾಹಕರು ಒಂದು " Unique Complaint Tracking Number " ನೀಡುವರು. ಇದರ ಸಹಾಯದಿಂದ ನಾಗರೀಕರು ತಮ್ಮ ದೂರಿನ ಸ್ಥಿತಿಯನ್ನು ತಿಳಿದುಕೊಳ್ಳಬಹುದಾಗಿದೆ.ದೂರು ಪರಿಹಾರ ಕಾರ್ಯದ ಪ್ರತಿ ಹಂತದ ಸ್ಥಿತಿಯನ್ನು ಇ-ಮೇಲ್ ಮೂಲಕ ಸಹ ಇ-ಮೇಲ್ ವಿಳಾಸ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.
-
ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಕಾರ್ಯ:ಪೌರ ಸುಧಾರಣಾ ಯೋಜನೆಯಡಿ ನವಲಗುಂದ ಪುರಸಭೆಯಲ್ಲಿ ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಅತೀ ಪ್ರಮುಖ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪಟ್ಟಣದ ಎಲ್ಲಾ ಆಸ್ತಿಗಳ ಸರ್ವೆಕಾರ್ಯ ಪೂರ್ಣಗಳಿಸಿ, ಆಸ್ತಿಗಳ ವಿವರ (ನಮೂನೆ "ಸಿ") ಡಾಟಾ ಎಂಟ್ರಿ ಮಾಡಿಸಿ ಪೌರ ಸುಧಾರಣಾ ಕೋಶಕ್ಕೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಪೌರ ಸುಧಾರಣಾ ಕೋಶದಿಂದ ಆನ್‌ಲೈನ್ ಮಾಡಲಾಗುವುದು.ಇದರಿಂದ ಪಟ್ಟಣದ ಆಸ್ತಿಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದ್ದು, ಆಸ್ತಿ ತೆರಿಗೆ ವಿವರ ಗಳನ್ನು ಸಹ ಸಾರ್ವಜನಿಕರು ಆನ್‌ಲೈನ್ ಮೂಲಕ ಪಡೆಯಬಹುದಾಗಿರುತ್ತದೆ ಹಾಗೂ ಆನ್ ಲೈನ್ ಮೂಲಕ ತೆರಿಗೆ ಆಸ್ತಿತೆರಿಗೆ ಪಾವತಿಸಬಹುದಾಗಿದ್ದು ಚನ್ನಗಿರಿ ಪಟ್ಟಣದ ನಾಗರೀಕರು ಶೀಘ್ರದಲ್ಲಿಯೇ ಇದರ ಸದುಪಯೋಗ ಪಡೆದುಕೊಳ್ಳಲಿದ್ದಾರೆ.
-
ನಿಧಿ ಆಧಾರಿತ ದ್ವಿ-ನಮೂದು ಸಂಚಯನ ಲೆಕ್ಕ ಪದ್ಧತಿ: ನವಲಗುಂದ ಪುರಸಭೆಯಲ್ಲಿ ಕಛೇರಿಯಲ್ಲಿ ನಿಧಿ ಆಧಾರಿತ ದ್ವಿನಮೂದು ಸಂಚಯನ ಲೆಕ್ಕ ಪದ್ಧತಿಯನ್ನು ಈಗಾಗಲೇ ಗಣಕೀಕರಣಗೊಳಿಸಲಾಗಿದ್ದು ಈ ಆನ್‌ಲೈನ್ ಅಪ್ಲಿಕೇಷನ್ ಮುಖಾಂತರ ನಗರ ಸ್ಥಳೀಯ ಸಂಸ್ಥೆಯ ಎಲ್ಲಾ ಯೋಜನೆಗಳ ಆರ್ಥಿಕ ಅಂಕಿ ಅಂಶಗಳನ್ನು ಕಛೇರಿಯ ಲೆಕ್ಕಿಗರು ದಿನಂಪ್ರತಿ ಅಪ್‌ಡೇಟ್ ಮಾಡುತ್ತಿದ್ದು ಕಛೇರಿಯ ಆಯ-ವ್ಯಯದ ಸಮರ್ಪಕ ನಿರ್ವಹಣೆಗೆ ಸಹಕಾರಿಯಾಗಿದೆ. ಈ ಆನ್‌ಲೈನ್ ಅಪ್ಲಿಕೇಷನ್ ಮುಖಾಂತರ ವಾರ್ಷಿಕ ಕಾರ್ಯ ನಿರ್ವಹಣಾ ವರದಿಯನ್ನೂ ಸಹ ಪಡೆಯಬಹುದಾಗಿದ್ದು ಕಛೇರಿಯ ಎಲ್ಲಾ ಆರ್ಥಿಕ ಚಟುವಟಿಕೆಗಳ ವಿವರ ಕಛೇರಿ ವೆಬ್‌ಸೈಟ್ ಮೂಲಕ ಅಂತರ್ಜಾಲದಲ್ಲಿ ಸಾರ್ವಜನಿಕರಿಗೆ ಲಭ್ಯವಿರುತ್ತದೆ.
-
ಇತರೆ ಆನ್‌ಲೈನ್ ಅಪ್ಲಿಕೇಷನ್‌ಗಳು: ಸಿ.ಎಂ.ಎಸ್.ಎಂ.ಟಿ.ಡಿ.ಪಿ, ಆಶಾಕಿರಣ ಮಾಹಿತಿ, ಎಸ್.ಜೆ.ಎಸ್.ಆರ್.ವೈ, ಎಸ್.ಎಲ್.ಬಿ, ನಮ್ಮ ಮನೆ ಇತ್ಯಾದಿ ಪ್ರಮುಖ ಆನ್ ಲೈನ್ ಅಪ್ಲಿಕೇಷನ್ ಗಳನ್ನು ಪೌರಸುಧಾರಣಾ ಕೋಶದ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಲಾಗಿದ್ದು ಕಛೇರಿಯ ಸುಲಭ ನಿರ್ವಹಣೆಗೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಈ ಆನ್‌ಲೈನ್ ಅಪ್ಲಿಕೇಷನ್‌ಗಳ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ.
" This Page is maintained By Chief Officer Shri S A Byali, Last Updated on 18-01-2012."

